133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

0

ಬೀಜಿಂಗ್: ಚೀನಾದಲ್ಲಿ 133 ಜನ ಪ್ರಯಾಣಿಸುತ್ತಿದ್ದ ವಿಮಾನವೊಂದು ದಕ್ಷಿಣ ಪ್ರಾಂತ್ಯದ ಗುವಾಂಗ್ಸಿಯಲ್ಲಿ ಸೋಮವಾರ ಪತನಗೊಂಡಿದ್ದು, ಪರ್ವತದ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಚೀನಾ ಈಸ್ಟರ್ನ್​ ಏರ್​ಲೈನ್ಸ್​ಗೆ ಸೇರಿದ ಬೋಯಿಂಗ್​ 737-800 ವಿಮಾನ MU5735 ವಿಮಾನ ಟೆಂಗ್ ಕೌಂಟಿಯ ವುಝೌ ನಗರದ ಬಳಿ ಅಪಘಾತಕ್ಕೀಡಾಗಿದ್ದು, ಗುಡ್ಡ ಪ್ರದೇಶದಿಂದ ಭರ್ಜರಿ ಹೊಗೆ ಏಳುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇದು ಸುಮಾರು ಆರು ವರ್ಷ ಹಳೆ ವಿಮಾನವಾಗಿದ್ದು, ಅಪಘಾತದಲ್ಲಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಆದರೆ ತಕ್ಷಣಕ್ಕೆ ಮೃತಪಟ್ಟವರ ಮತ್ತು ಗಾಯಗೊಂಡವರ ಸಂಖ್ಯೆಯ ಬಗ್ಗೆ ಮಾಹಿತಿ ಇಲ್ಲ ಎಂದು ವರದಿ ಹೇಳಿದೆ.

ಈ ವಿಮಾನ ಕನ್ಮಿಂಗ್‌ ನಿಂದ ಗುವಾಂಗ್ಸಿ ನಗರಕ್ಕೆ ತೆರಳುತ್ತಿತ್ತು. ಆದರೆ, ನಿಗದಿತ ಸಮಯಕ್ಕೆ ಗುವಾಂಗ್ಸಿ ನಗರಕ್ಕೆ ವಿಮಾನ ತಲುಪಿಲ್ಲ ಎಂದು ವರದಿಗಳು ಹೇಳಿವೆ. ಮಧ್ಯಾಹ್ನ 1 ಗಂಟೆಗೆ ವಿಮಾನ ಪತನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Get real time updates directly on you device, subscribe now.

Leave A Reply

Your email address will not be published.

Don`t copy text!