ಆ್ಯಸಿಡ್ ನಾಗನನ್ನು ಹಿಡಿಯಲು ಸ್ವತಃ ಖಾವಿ ಧರಿಸಿದ್ದ ಪೊಲೀಸರು

0

ಬೆಂಗಳೂರು: ಕಳೆದ ತಿಂಗಳು ನಗರದಲ್ಲಿ ಯುವತಿ ಮೇಲೆ ಆ್ಯಸಿಡ್ ಎರಚಿ‌ ವಿಕೃತಿ ಮೆರೆದಿದ್ದ ಆರೋಪಿ‌ ನಾಗೇಶ್ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿಯ ವೇಷದಲ್ಲಿ ಆರೋಪಿ ನಾಗ ಸಿಕ್ಕಿಬಿದ್ದಿದ್ದಾನೆ.

ಕೃತ್ಯ ಎಸಗಿದಾಗಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್​​ ಖಾವಿ ಧರಿಸಿ ಧ್ಯಾನ ಮಾಡುತ್ತಿದ್ದ. 16 ದಿನಗಳ ಬಳಿಕ ನಿರಂತರ ಶೋಧದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಎಲ್ಲ ಕಸರತ್ತು ನಡೆಸಿದ್ದ ಬೆಂಗಳೂರು ಪೊಲೀಸರು ಈಗಾಗಲೇ ಆತನ ಫೋಟೋಗಳನ್ನ ಇತರ ಎಲ್ಲ ರಾಜ್ಯಗಳ ಪೊಲೀಸರಿಗೆ ಕಳುಹಿಸಿದ್ದರು.

ಧ್ಯಾನದ ವೇಳೆ ತಮಿಳುನಾಡಿನ ತಿರುವಣ್ಣಾಮಲೈ ನಲ್ಲಿ ಆರೋಪಿ ಸಿಕ್ಕಿಬಿದ್ದಿದ್ದು, ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯೊಂದಿಗೆ ಪೊಲೀಸರು ನಗರದತ್ತ ಬರುತ್ತಿದ್ದು, ರಾತ್ರಿ 11 ಗಂಟೆ ವೇಳೆಗೆ ಬೆಂಗಳೂರು ತಲುಪಲಿದ್ದಾರೆ. ಆರೋಪಿಯನ್ನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಿದ್ದಾರೆ.

 ಗಾರ್ಮೆಂಟ್ಸ್​ನಲ್ಲಿ ಕೆಲಸ‌ ಮಾಡುತ್ತಿದ್ದ ಆರೋಪಿ ನಾಗೇಶ್ ಸಂತ್ರಸ್ತ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ‌ ಆಕೆ ಪ್ರೀತಿ ನಿರಾಕರಿಸಿದ್ದಳು‌. ಇದರಿಂದ ಕೋಪಗೊಂಡು ದಾಳಿಗೆ ಸಂಚು ರೂಪಿಸಿದ್ದು,‌ ಕಳೆದ ಏಪ್ರಿಲ್ 28ರಂದು ಬೆಳಗ್ಗೆ ಸುಂಕದಕಟ್ಟೆಯ ಮುತ್ತೂಟ್ ಮಿನಿ ಫೈನಾನ್ಸ್ ಕಚೇರಿ ಬಳಿ ಯುವತಿಗೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಳಲ್ಲದೆ, ನಾಗೇಶ್ ಕೈಗೂ ಗಾಯವಾಗಿತ್ತು.

ತಕ್ಷಣ ಆರೋಪಿ ನಾಗೇಶ್​​ ವಕೀಲರನ್ನ ಸಂಪರ್ಕಿಸಿದ್ದು, ಯಾರೂ ಕೂಡ ಪ್ರಕರಣ ತೆಗೆದುಕೊಂಡಿರಲಿಲ್ಲ. ಹೀಗಾಗಿ ಆರೋಪಿಯು ಬಂಧನ ಭೀತಿಯಿಂದ ತಮಿಳುನಾಡಿಗೆ ಪರಾರಿಯಾಗಿದ್ದ. ಇತ್ತ ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಿ ಶೋಧಕ್ಕಿಳಿದರೂ, ಇದುವರೆಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಈತನ ಪತ್ತೆಗಾಗಿ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ‌ ಕರಪತ್ರ ಪ್ರಕಟಿಸಿ ಆಂಧ್ರಪ್ರದೇಶ, ತಮಿಳುನಾಡಿನ ದೇವಸ್ಥಾನ, ಮಠಗಳಲ್ಲಿ ಹಂಚಿದ್ದರು. ಅಲ್ಲದೇ ಎಲ್ಲ ಪೊಲೀಸ್ ಠಾಣೆಗಳಿಗೆ ಲುಕ್ ಔಟ್ ನೋಟಿಸ್ ಹೊರಡಿಸಲಾಗಿತ್ತು.

Get real time updates directly on you device, subscribe now.

Leave A Reply

Your email address will not be published.

Don`t copy text!