ರೋಗಿಗಳಿಗೆ ಹಣ್ಣುಹಂಪಲು ವಿತರಣೆ

0

ದೊಡ್ಡಬಳ್ಳಾಪುರ: ತಾಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಜಘಟ್ಟ ಗ್ರಾಮ ಪಂಚಾಯತಿ ಸದಸ್ಯ ಎ.ಶಿವಕುಮಾರ್ ಅವರ 33ನೇ ಹುಟ್ಟುಹಬ್ಬದ ಅಂಗವಾಗಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು ಕೊರೊನಾ ಸಂದರ್ಭದಲ್ಲಿ ಜೀವ, ಆರೋಗ್ಯದ ಬೆಲೆ ಜನರಿಗೆ ತಿಳಿದಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಇಂದಿನ ಮೊಬೈಲ್ ಜಗತ್ತಿನಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಯಾವುದೇ ಸಣ್ಣಪುಟ್ಟ ಆರೋಗ್ಯ ಏರುಪೇರಾದರು ಮೊದಲು ವೈದ್ಯಕೀಯ ಸಲಹೆ ಪಡೆಯಬೇಕಿದೆ. ಕೋವಿಡ್ ವೇಳೆ ರೋಗಿಗಳ ಪರದಾಟವನ್ನು ಕಣ್ಣಾರೆ ಕಂಡು ಅನುಭವಿಸಿದ್ದೇನೆ ಹೀಗಾಗಿ ರೋಗಿಗಳಿಗೆ ಹಣ್ಣು ಹಂಪಲುನ್ನು ವಿತರಣೆ ಮಾಡುತ್ತಿದ್ದೇನೆ ಎಂದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ರಾಜಘಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷೆ ರತ್ನಮ್ಮ ಆಂಜನೇಯ, ಮಾಜಿ ಅಧ್ಯಕ್ಷರಾದ ಆರ್.ಸಿ.ಶಿವಕುಮಾರ್, ಸದಸ್ಯರಾದ ಮುನಿರಾಜು, ಸುಜಾತ ಸೇರಿದಂತೆ ಇತರರು ಸಾಥ್ ನೀಡಿದರು.

Get real time updates directly on you device, subscribe now.

Leave A Reply

Your email address will not be published.

Don`t copy text!