ಹಾಡೋನಹಳ್ಳಿಯಲ್ಲಿ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ತರಬೇತಿ

0

ದೊಡ್ಡಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯದಂತೆ ಆತ್ಮನಿರ್ಭರ ಕೃಷಿಗೆ, ಕೃಷಿಯಲ್ಲಿ ಡ್ರೋನ್‍ಗಳ ಬಳಕೆ ಬಹಳ ಉಪಕಾರಿಯಾಗಿರುವುದರಿಂದ, ಕೃಷಿ ವಿಜ್ಞಾನ ಕೇಂದ್ರ, ಇಫ್ಕೋ ಸಂಸ್ಥೆ, ಕೃಷಿ ಇಲಾಖೆ ಮತ್ತು ಕೃಷಿ ವಿಶ್ವವಿದ್ಯಾನಿಲಯ ಇವರ ಸಂಯುಕ್ತಾಶ್ರಯದಲ್ಲಿ ಡ್ರೋನ್ ಪೈಲಟ್‍ಗಳ ತರಬೇತಿ ಕಾರ್ಯಾಗಾರವನ್ನು ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ ಇಂದಿನಿಂದ ಆರಂಭವಾಗಿದೆ.

ಮೇ.21ರಿಂದ ಜೂನ್.03ರ ವರೆಗೆ ಈ ತರಬೇತಿ ಕಾರ್ಯಾಗಾರ ನಡೆಯಲಿದ್ದು, 25 ಜನ ಶಿಬಿರಾರ್ಥಿಗಳು ಭಾವಹಿಸಿದ್ದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅಪರ ಕೃಷಿ ನಿರ್ದೇಶಕ ವೆಂಕಟರಾಮ ರೆಡ್ಡಿ ಪಾಟೀಲ್, ಡ್ರೋನ್‍ಗಳ ಬಳಕೆಯಿಂದ ಕೂಲಿಯಾಳುಗಳ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ, ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ರಸಗೊಬ್ಬರ ಮತ್ತು ನೀರಿನ ಬಳಕೆ ಕಡಿಮೆ ಮಾಡಿ ಅಧಿಕ ಉತ್ಪಾದನೆಯನ್ನು ಪಡೆಯಬಹುದು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮಾರಾಟ ವ್ಯವಸ್ಥಾಪಕ ಡಾ.ಸಿ.ನಾರಾಯಣಸ್ವಾಮಿ, ಇಪ್ಕೋ ಸಂಸ್ಥೆ ವಿನುತ, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ ಮತ್ತಿತರರಿದ್ದರು.

Get real time updates directly on you device, subscribe now.

Leave A Reply

Your email address will not be published.

Don`t copy text!